ರಸ್ತೆ ಅಪಘಾತ: ಸ್ವಾತಂತ್ರ್ಯೋತ್ಸವ ಆಚರಣೆಗೆ ತೆರಳುತ್ತಿದ್ದ ಶಿಕ್ಷಕ ಸಾವು

Prasthutha|

ಕಾರವಾರ: ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಕುಮಟಾ ತಾಲ್ಲೂಕಿನ ಹಳಕಾರ ಕ್ರಾಸ್ ಬಳಿ ಮಂಗಳವಾರ ನಡೆದಿದೆ.

- Advertisement -


ಗುಡೇ ಅಂಗಡಿ ಶಾಲೆಯ ಶಿಕ್ಷಕ ಗೋಪಾಲ ಪಟಗಾರ (50) ಮೃತರು.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬುಲೆರೊ ವಾಹನ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತ ಪಟ್ಟರು ಎಂದು ಕುಮಟಾ ಠಾಣೆ ಪೊಲೀಸರು ತಿಳಿಸಿದ್ದಾರೆ.

Join Whatsapp