Home ಕರಾವಳಿ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

ಸುಳ್ಯ: ಗೂನಡ್ಕ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.3ರಂದು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ  ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತ ವಹಿಸಿದ್ದರು.  ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ವನಿತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

 ಶಿಕ್ಷಕಿ ರೂಪಾರ ಮಾರ್ಗದರ್ಶನದಲ್ಲಿ ಹಾಗೂ ವಿದ್ಯಾರ್ಥಿ ನಾಯಕ ಅಶ್ವಿನ್ ಅವರ ನಾಯಕತ್ವದಲ್ಲಿ ಶಾಲಾ ಮಕ್ಕಳು ಶಿಕ್ಷಕರಿಗೆಂದೇ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ಭಾಗವಹಿಸಿ ಆನಂದಿಸಿದರು. ವಿದ್ಯಾರ್ಥಿನಿ ಶಿಮ್ರಾ, ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.

 ವಿದ್ಯಾರ್ಥಿನಿ ಹರ್ಷಿತಾ ಸ್ವಾಗತಿಸಿ ವಿದ್ಯಾರ್ಥಿನಿ  ಲಿಬಿನ್ ವಂದಿಸಿದರು. ವಿದ್ಯಾರ್ಥಿನಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.

Join Whatsapp
Exit mobile version