Home ಟಾಪ್ ಸುದ್ದಿಗಳು ಶಿಕ್ಷಕರ ಸಮಸ್ಯೆಗೆ ಶೀಘ್ರವೇ ಪರಿಹಾರ: ಸಿದ್ದರಾಮಯ್ಯ

ಶಿಕ್ಷಕರ ಸಮಸ್ಯೆಗೆ ಶೀಘ್ರವೇ ಪರಿಹಾರ: ಸಿದ್ದರಾಮಯ್ಯ

►‘ಬಾಲ್ಯದ ನೆನಪು ಮಾಡಿಕೊಂಡ ಸಿಎಂ’

ಬೆಂಗಳೂರು: ಬುಧವಾರ ಶಿಕ್ಷಕ ಸಂಘದ ಜೊತೆ ಚರ್ಚೆ ಮಾಡಿದ್ದೇವೆ. ಹಲವು ಸಮಸ್ಯೆ ಹೇಳಿದ್ದಾರೆ. ಸರ್ಕಾರಕ್ಕೆ ಸಮಸ್ಯೆಗಳ ಅರಿವಾಗಿದೆ. ಆದಷ್ಟು ಶೀಘ್ರವೇ ಶಿಕ್ಷಕರ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ತಮ್ಮ ಬಾಲ್ಯದ ನೆನಪು ಮಾಡಿಕೊಂಡ ಸಿಎಂ, ನನಗೆ ಶಿಕ್ಷಕರು ಕಂಡರೆ ಅಪಾರಗೌರವ ಇದೆ. ನನಗೆ ರಾಜಪ್ಪ ಮೇಷ್ಟ್ರು ಕಂಡರೆ ಇಷ್ಟ. ನಾನು 1 ರಿಂದ 4ನೇ ತರಗತಿ ಓದಿರಲಿಲ್ಲ. ರಾಜಪ್ಪ ಮೇಷ್ಟ್ರು ನನ್ನನ್ನು ನೇರವಾಗಿ 5ನೇ ತರಗತಿಗೆ ಸೇರಿಸಿದ್ರು. ಅಂತಹ ಶಿಕ್ಷಕರು ಇರಬೇಕು ಎಂದರು.

ನಾನು ಹೈಸ್ಕೂಲ್‌ ಗೆ ಹೋಗೋವರೆಗೂ ಚಪ್ಪಲಿ ಹಾಕಿರಲಿಲ್ಲ. ಬರೀ ಕಾಲಲ್ಲಿ ನಡೆದಿದ್ದೆ. ಇದಕ್ಕಾಗಿ ಸಿಎಂ ಆದ ಮೇಲೆ ಶೂ ಭಾಗ್ಯ ತಂದೆ. ನಮ್ಮ ಸರ್ಕಾರ ಬಂದ ಮೇಲೆ ವಿದ್ಯಾಸಿರಿ ಕಾರ್ಯಕ್ರಮ ಮಾಡಿದೆ. ನಮ್ಮ ಅಪ್ಪ ಹಾಸ್ಟೆಲ್‌ ಗೆ ಸೇರಿಸಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಓದುತ್ತಿದ್ದೆ. ನನ್ನ ಅನುಭವದಿಂದ ವಿದ್ಯಾಸಿರಿ ಯೋಜನೆ ಜಾರಿ ಮಾಡಿದೆ. ನಾನು ಇಲ್ಲಿಯವರೆಗೆ ಬರಲು ಶಿಕ್ಷಣ ಕಾರಣ ಮತ್ತು ರಾಜಪ್ಪ ಮೇಷ್ಟ್ರು ಕಾರಣ. ಶಿಕ್ಷಣ ಬಹಳ ಮಹತ್ವದ್ದು. ಶಿಕ್ಷಣ ಅತ್ಯಗತ್ಯ. ಅರಿವು ಮತ್ತು ಜ್ಞಾನ, ಸ್ವಾಭಿಮಾನ, ಜಾತ್ಯಾತೀತ ಭಾವ ಬಂದಾಗ ಮಾತ್ರ ಶಿಕ್ಷಣ ಪಡೆದಿದ್ದು ಸಾರ್ಥಕವಾಗುತ್ತದೆ ಎಂದು ತಿಳಿಸಿದರು

Join Whatsapp
Exit mobile version