ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಶಾಲೆಗಳು ರಾಜ್ಯ ಮಂಡಳಿಗೆ ಮಾತ್ರ ಸಂಬಂಧ ಹೊಂದಿದ್ದರೂ, ಅವರು ICSE ಅಥವಾ CBSE ಪಠ್ಯಕ್ರಮವನ್ನು ಬೋಧಿಸುತ್ತಿರುವುದನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (DSEL) ಪತ್ತೆ ಹಚ್ಚಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (DSEL) ಕಳೆದ ಹದಿನೈದು ದಿನಗಳಿಂದ, ಅನಧಿಕೃತವಾಗಿ “ಕೇಂದ್ರ ಪಠ್ಯಕ್ರಮ” ನಡೆಸುತ್ತಿರುವ ಶಾಲಾ ಮ್ಯಾನೇಜ್’ಮೆಂಟ್’ಗಳ ಮೇಲೆ ಕಠಿಣ ಕ್ರಮಕೈಗೊಳ್ಳುವಂತೆ 700 ಕ್ಕೂ ಹೆಚ್ಚು ಶಾಲೆಗಳಿಗೆ ನೋಟಿಸ್ ನೀಡಿದೆ. ಅದರಲ್ಲಿ ಬೆಂಗಳೂರು ನಗರದಲ್ಲೇ 600 ಕ್ಕೂ ಹೆಚ್ಚು ಶಾಲೆಗಳಿವೆ.
ಇದು ಕೆಲವು ವರ್ಷಗಳಿಂದ ನಡೆಯುತ್ತಿದೆ. ಇದರಲ್ಲಿ ಸರಕಾರದ ವೈಫಲ್ಯವು ಎದ್ದು ಕಾಣುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಇದು ಕರ್ನಾಟಕ ಶಿಕ್ಷಣ ಕಾಯಿದೆ, 1983 ಮತ್ತು ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಕಾಯಿದೆ, 2009 ರ ನಿಯಮಗಳನ್ನು ಉಲ್ಲಂಘಿಸುತ್ತದೆ.