ಶಿಕ್ಷಕರಿಂದ ರಾಜ್ಯಾದ್ಯಂತ ನಾಳೆ ಕಪ್ಪು ಪಟ್ಟಿ ಧರಿಸಿ ಪಾಠ!

Prasthutha|

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಾಳೆಯಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ನಿರ್ಧರಿಸಿದೆ.

- Advertisement -

ಪದವೀಧರ ಶಿಕ್ಷಕರ ಸಮಸ್ಯೆ ಹಾಗೂ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ ಸೇರಿ ಮುಖ್ಯ ಶಿಕ್ಷಕರುಗಳಿಗೆ 15, 20, 25 ವರ್ಷಗಳ ವೇತನ ಬಡ್ತಿ ನೀಡಬೇಕೆಂದು ಆಗ್ರಹಿಸಿದ್ದಾರೆ‌‌.ಹಾಗೇ, ನೂತನ ಪಿಂಚಣಿ ಯೋಜನೆ ರದ್ದುಗೊಳಿಸಬೇಕು, ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಕಳೆದ 3 ತಿಂಗಳ ಹಿಂದೆಯೇ ಈ ಕುರಿತು ಕಾಲಮಿತಿಯಲ್ಲಿ ಶಿಕ್ಷಕರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ತೀರ್ಮಾನ ಕೈಗೊಳ್ಳಲು ಮನವಿ ಮಾಡಲಾಗಿತ್ತು. ಇದೀಗ ಈಡೇರದ ಕಾರಣಕ್ಕೆ ಸರ್ಕಾರದ ಗಮನ ಸೆಳೆಯಲು ನಾಳೆ ಮಕ್ಕಳಿಗೆ ಪಾಠ ಮಾಡುವ ವೇಳೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ಶಿಕ್ಷಕರು ಸಜ್ಜಾಗಿದ್ದಾರೆ.



Join Whatsapp