ದಾವಣಗೆರೆ: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಬೆಳಗ್ಗೆ ರೆಡಿಯಾಗಿ ಕಾಂಗ್ರೆಸ್ ಶಾಸಕರ ಮನೆಗೆ ಹೋಗುತ್ತಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಾರೆ. ಈ ಗ್ಯಾಂಗ್ ನಲ್ಲಿ ಬಿಎಸ್ ಯಡಿಯೂರಪ್ಪ ಪಿಎ ಆಗಿದ್ದ ಸಂತೋಷ್ ಸಹ ಇದ್ದಾರೆ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು,’ನಮ್ಮ ಶಾಸಕರನ್ನು ಬನ್ನಿ ದೆಹಲಿಗೆ ವಿಶೇಷ ವಿಮಾನ ಮಾಡುತ್ತೇವೆ, ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇವೆ, ನಮ್ಮ ಬಳಿ ಸಾಕಷ್ಟು ಶಾಸಕರಿದ್ದಾರೆ ಎಂದು ಹೇಳಿಕೊಂಡು ಒಂದು ಗ್ಯಾಂಗ್ ಓಡಾಡುತ್ತಿದೆ. ನಮ್ಮ ನಾಲ್ಕು ಜನ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ್ದಾರೆ. ಆ ಗ್ಯಾಂಗ್ನಲ್ಲಿ ಒಬ್ಬರು ಬಿಎಸ್ ಯಡಿಯೂರಪ್ಪ ಅವರ ಪಿಎ ಆಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.