ಟಿ20 ಸರಣಿಯ ಅಂತಿಮ ಪಂದ್ಯ| ಟಾಸ್‌ ಗೆದ್ದ ಭಾರತ, ಪಂತ್‌ ಬದಲು ಭುವನೇಶ್ವರ್‌ಗೆ ಸ್ಥಾನ

Prasthutha|

ಹೈದರಾಬಾದ್:‌

- Advertisement -

ಭಾರತ-ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ʻಫೈನಲ್‌ʼ ಪಂದ್ಯದ ಟಾಸ್‌ ಭಾರತದ ಪಾಲಾಗಿದೆ. ಪ್ರವಾಸಿ ಆಸ್ಟ್ರೇಲಿಯಾ ತಂಡವನ್ನು ರೋಹಿತ್‌ ಶರ್ಮಾ, ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ. ‌

ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯಗಳಲಿ ಗೆಲುವು ಸಾಧಿಸಿ ಸಮಬಲ ಸಾಧಿಸಿದ್ದು,  ವಿದರ್ಭ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಪ್ರಶಸ್ತಿ ಸುತ್ತಿನ ನಿರ್ಣಾಯಕ ಪಂದ್ಯ ನಡೆಯುತ್ತಿದೆ.

- Advertisement -

ಮಹತ್ವದ ಪಂದ್ಯಕ್ಕಾಗಿ ಟೀಮ್‌ ಇಂಡಿಯಾದಲ್ಲಿ 1 ಬದಲಾವಣೆ ಮಾಡಿಕೊಳ್ಳಲಾಗಿದೆ. ಅನುಭವಿ ವೇಗಿ ಭುವನೇಶ್ವರ್‌ ಕುಮಾರ್‌ ತಂಡಕ್ಕೆ ಮರಳಿದ್ದು, ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಸ್ಥಾನ ಕಳೆದುಕೊಂಡಿದ್ದಾರೆ.

ಆಡುವ ಹನ್ನೊಂದರ ಬಳಗ

ಭಾರತ XI: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್‌ ಕೀಪರ್), ಅಕ್ಷರ್‌ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್‌ಪ್ರೀತ್‌ ಬುಮ್ರಾ, ಯಜುವೇಂದ್ರ ಚಾಹಲ್

ಆಸ್ಟ್ರೇಲಿಯಾ XI: ಆರನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್‌ ಕೀಪರ್), ಪ್ಯಾಟ್ ಕಮಿನ್ಸ್, ನಾಥನ್ ಎಲ್ಲಿಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ಮೊಹಾಲಿಯಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ 6 ವಿಕೆಟ್‌ ಅಂತರದಲ್ಲಿ ಪ್ರವಾಸಿಗರಿಗೆ ಶರಣಾಗಿದ್ದ ರೋಹಿತ್‌ ಪಡೆ, ಮಳೆಯಿಂದಾಗಿ 8 ಓವರ್ಗಳಿಗೆ ಸೀಮಿತವಾಗಿದ್ದ ಎರಡನೇ ಪಂದ್ಯದಲ್ಲಿ ನಾಲ್ಕು ಎಸೆತಗಳು ಬಾಕಿ ಇರುವಂತೆಯೇ ಜಯಭೇರಿ ಬಾರಿಸಿತ್ತು.

Join Whatsapp