Home ಕ್ರೀಡೆ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಗೆದ್ದು ಬೀಗಿದ ಟೀಮ್ ಇಂಡಿಯಾ: ಸರಣಿ ಕೈವಶ

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ಗೆದ್ದು ಬೀಗಿದ ಟೀಮ್ ಇಂಡಿಯಾ: ಸರಣಿ ಕೈವಶ

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವನ್ನು ಟೀಮ್ ಇಂಡಿಯಾ 44 ರನ್’ಗಳ ಅಂತರದಲ್ಲಿ ಗೆದ್ದು ಬೀಗಿದೆ. ಆ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ.

ಅಹಮದಾಬಾದ್’ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ರೋಹಿತ್ ಪಡೆ 9 ವಿಕೆಟ್ ನಷ್ಟದಲ್ಲಿ 237 ರನ್’ಗಳಿಸಿತ್ತು. ಸಾಧಾರಣ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್, ಪ್ರಸಿದ್ಧ್ ಕೃಷ್ಣ ಬಿಗು
ಬೌಲಿಂಗ್ ದಾಳಿಗೆ ಕುಸಿದು 46 ಓವರ್‌’ಗಳಲ್ಲಿ 193 ರನ್ ಗಳಿಸಲಷ್ಟೇ ಶಕ್ತವಾಯಿತು.

ಕುಸಿದ ಟೀಮ್ ಇಂಡಿಯಾಗೆ ಆಸರೆಯಾದ ಸೂರ್ಯಕುಮಾರ್, ರಾಹುಲ್ !

ಮೊಟೇರಾದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ರೋಹಿತ್ ಶರ್ಮಾ ಜೊತೆಗಾರನಾಗಿ ರಿಷಭ್ ಪಂತ್’ರನ್ನು ಕಣಕ್ಕಿಳಿಸುವುದರ ಮೂಲಕ ಹೊಸ ಪ್ರಯೋಗ ಮಾಡಿತ್ತು. ಆದರೆ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ಇಬ್ಬರೂ ವಿಫಲರಾದರು.
ರೋಹಿತ್ ಶರ್ಮಾ 8 ರನ್, ರಿಷಭ್ ಪಂತ್ 18 ರನ್ ಹಾಗೂ ಮೂರನೇ ಕ್ರಮಾಂಕದಲ್ಲಿ ಬಂದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಹೀಗಾಗಿ 12 ಓವರ್‌ ಕಳೆಯುವಷ್ಟರಲ್ಲಿ ಮೂರು ಪ್ರಮುಖ ವಿಕೆಟ್ ಕಳೆದುಕೊಂಡು ಟೀಮ್ ಇಂಡಿಯಾ, ಕೇವಲ 43 ರನ್ ಗಳಿಸಿತ್ತು. ಈ ಸಂದರ್ಭದಲ್ಲಿ ಜತೆಯಾದ ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ 91 ರನ್‌ಗಳ ಜತೆಯಾಟವನ್ನು ಆಡುವುದರ ಮೂಲಕ ತಂಡವನ್ನು ಉತ್ತಮ ಸ್ಥಿತಿಯತ್ತ ಕೊಂಡೊಯ್ದರು. ಕೆಎಲ್ ರಾಹುಲ್ 49 ರನ್ ಮತ್ತು ಸೂರ್ಯಕುಮಾರ್ ಯಾದವ್ 64 ರನ್ ಕಲೆಹಾಕಿ ತಂಡಕ್ಕೆ ಆಪತ್ಬಾಂಧವರಾದರು.

Join Whatsapp
Exit mobile version