ಯುಪಿಯಲ್ಲಿ ಹದಿಹರೆಯದ ಯುವತಿ ಶವವಾಗಿ ಪತ್ತೆ: ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ

Prasthutha|

ಅಲಿಗಡ: ಅಲಿಗಡ ಅಕ್ರಾಬಾದ್ ಬಳಿಯ ಹಳ್ಳಿಯೊಂದರಲ್ಲಿ 18 ವರ್ಷದ ಯುವತಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾರೆಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

- Advertisement -

ಹದಿಹರೆಯದ ಯುವತಿ ಬುಧವಾರ ಸಂಜೆ ಹೊಲಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋದವಳು ಮನೆಗೆ ಹಿಂದಿರುಗಿಲ್ಲ ಎಂದು ಸಂತ್ರಸ್ತೆಯ ಕುಟುಂಬ ತಿಳಿಸಿದೆ.

ಮನೆಯಿಂದ ಸುಮಾರು 500 ಮೀಟರ್ ದೂರದಲ್ಲಿ ಆಕೆಯ ಮೃತದೇಹವನ್ನು ಗ್ರಾಮಸ್ಥರು ಪತ್ತೆಹಚ್ಚಿದ್ದರು. ದೇಹದಲ್ಲಿರುವ ಗಾಯದ ಗುರುತಿನ ಹಿನ್ನೆಲೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆಯಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಶುಭಂ ಪಟೇಲ್ ಸುದ್ದಿಗಾರರೊಂದಿಗೆ ಮಾತನಾಡಿ, ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿದ ಕಾರಣ ಸಾವು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಲೈಂಗಿಕ ದೌರ್ಜನ್ಯದ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ವಿಧಿವಿಜ್ಞಾನ ಪರೀಕ್ಷೆಯ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ತಿಳಿಸಿದರು.



Join Whatsapp