ತೀಸ್ತಾ ಸೆಟಲ್ವಾಡ್ ಸಾಬರಮತಿ ಜೈಲಿನಿಂದ ಬಿಡುಗಡೆ

Prasthutha|

ಅಹ್ಮದಾಬಾದ್: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರು ಗುಜರಾತ್ ನ ಸಾಬರಮತಿ ಜೈಲಿನಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

- Advertisement -

2002ರ ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ ನಂತರ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತರಾಗಿದ್ದ ತೀಸ್ತಾ ಅವರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ನೀಡಿತ್ತು.

ಇಂದು ತೀಸ್ತಾ ಅವರನ್ನು ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಲಾಯಿತು. ಅವರನ್ನು ಬಿಡುಗಡೆಗೊಳಿಸುವ ಆದೇಶಕ್ಕೆ ನ್ಯಾಯಾಧೀಶರು ಸಹಿ ಹಾಕಿದರು. ನಂತರ ಜೈಲಾಧಿಕಾರಿಗಳು ಕಾನೂನು ಪ್ರಕ್ರಿಯೆ ಮುಗಿಸಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿದರು.

Join Whatsapp