ಹೋರಾಗಾರ್ತಿ ತೀಸ್ತಾ ಸೆಟಲ್ವಾಡ್ ಮಧ್ಯಂತರ ಜಾಮೀನು ಜುಲೈ 19 ರವರೆಗೆ ವಿಸ್ತರಣೆ

Prasthutha|

ದೆಹಲಿ: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಜುಲೈ 1ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದೀಗ ಮತ್ತೆ ಈ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಇಂದು ಜುಲೈ 19 ರ ಮುಂದಿನ ವಿಚಾರಣೆಯವರೆಗೆ ವಿಸ್ತರಿಸಿದೆ.

- Advertisement -


2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ನಿರಪರಾಧಿಗಳನ್ನು ಬಂಧಿಸಲು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಪ್ರಕರಣದಲ್ಲಿ ಶರಣಾಗುವಂತೆ ಗುಜರಾತ್ ಹೈಕೋರ್ಟ್ ನೀಡಿದ ಆದೇಶದ ವಿರುದ್ಧ ಸೆಟಲ್ವಾಡ್ ಅವರ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಸೆಟಲ್ವಾಡ್ ಅವರ ಸಾಮಾನ್ಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.



Join Whatsapp