Home ಟಾಪ್ ಸುದ್ದಿಗಳು ಟೆಹ್ರಾನ್: ಹಿಜಾಬ್ ನಿಷೇಧ ವಿರೋಧಿಸಿ ಇರಾನ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಟೆಹ್ರಾನ್: ಹಿಜಾಬ್ ನಿಷೇಧ ವಿರೋಧಿಸಿ ಇರಾನ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಇರಾನ್: ಕರ್ನಾಟಕದಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ನಿಷೇಧದ ವಿರುದ್ಧ ಇರಾನ್ ಮತ್ತು ವಿದೇಶಿ ವಿದ್ಯಾರ್ಥಿಗಳು ಭಾರತೀಯ ರಾಯಭಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ದೇಶಾದ್ಯಂತ ಏಕರೂಪ ನಾಗರಿಕ ವಸ್ತ್ರಸಂಹಿತೆ ಗಾಗಿ ಪ್ರಯತ್ನ ನಡೆಸುತ್ತಿರುವ ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಹಿಜಾಬ್ ಆದೇಶದ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ಸರ್ಕಾರಕ್ಕೆ ಒತ್ತಡ ಹೇರುವಂತೆ ಇರಾನ್ ನಲ್ಲಿರುವ ಅಧಿಕಾರಿಗಳಿಗೆ ಕರೆ ನೀಡಿದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.

ಪ್ರತಿಭಟನಾ ನಿರತ ವಿದಾರ್ಥಿಗಳು ಹಿಜಾಬ್ ಕಟ್ಟುಪಾಡುಗಳ ವಿರುದ್ಧ ಘೋಷಣಾ ಫಲಕಗಳನ್ನು ಹಿಡಿದು ಮುಸ್ಲಿಮ್ ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜಾಬ್ ಮೇಲಿನ ನಿಷೇಧ ಮೂಲಭೂತ ಹಕ್ಕುಗಳ ಉಲ್ಲಂಘಣೆ ಮತ್ತು ಮುಸ್ಲಿಮರ ವಿರುದ್ಧದ ತಾರತಮ್ಯ ಧೋರಣೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Join Whatsapp
Exit mobile version