ಉದಯಪುರ ಹತ್ಯಾ ಆರೋಪಿಗೆ ಬಿಜೆಪಿ ನಂಟು: ಆರ್.ಜೆ.ಡಿ ಮುಖಂಡ ತೇಜಸ್ವಿ ಯಾದವ್

Prasthutha: July 4, 2022

ಪಾಟ್ನಾ: ರಾಜಸ್ತಾನದ ಉದಯಪುರದಲ್ಲಿ ಇತ್ತೀಚೆಗೆ ನಡೆದ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಆರೋಪಿ ರಿಯಾಝ್ ಅತ್ತಾರಿ ಎಂಬಾತನಿಗೆ ಬಿಜೆಪಿ ಜೊತೆ ನಂಟಿದೆ ಎಂದು ಆರ್.ಜೆ.ಡಿ ಮುಖಂಡ ತೇಜಸ್ವಿ ಯಾದವ್ ಅವರು ಗಂಭೀರವಾಗಿ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಕೆಲವು ಫೋಟೋಗಳು ಆರೋಪಿಯ ಬಿಜೆಪಿ ನಾಯಕರ ಜೊತೆಗಿನ ಸಂಬಂಧವನ್ನು ಬಹಿರಂಗಪಡಿಸುತ್ತದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರೊಂದಿಗೆ ಹತ್ಯೆಯ ಆರೋಪಿ ರಿಯಾಝ್ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ತೇಜಸ್ವಿ ಯಾದವ್ ಈ ಮೇಲಿನ ಆರೋಪವನ್ನು ಮಾಡಿದ್ದಾರೆ.

ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಯಾವುದೇ ಹಂತಕ್ಕೆ ಹೋಗುತ್ತದೆ ಎಂದು ಅವರು ಮತ್ತೊಂದು ಟ್ವೀಟ್’ನಲ್ಲಿ ಕಿಡಿಕಾರಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ