ತೇಜಸ್ವಿ ಸೂರ್ಯ ಸಂಸದನಾಗಿದ್ದು ಮಕ್ಕಳ ಕೈಗೆ ಆಟಿಕೆ ಸಿಕ್ಕಂತಾಗಿದೆ: ಕಾಂಗ್ರೆಸ್

Prasthutha|

► ತೇಜಸ್ವಿ, ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದಿದ್ದ ಸಂಗತಿಯನ್ನು ಸರ್ಕಾರ ಮುಚ್ಚಿಟ್ಟಿದ್ದೇಕೆ ?

- Advertisement -

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ವಿಮಾನದ ಸುರಕ್ಷಾ ನಿಯಮಗಳನ್ನು ಗಾಳಿಗೆ ತೂರಿ ಎಮರ್ಜೆನ್ಸಿ ಎಕ್ಸಿಟ್ ಬಾಗಿಲನ್ನು ತೆರೆದಿದ್ದ ಸಂಗತಿಯನ್ನು ಸರ್ಕಾರ ಮುಚ್ಚಿಟ್ಟಿದ್ದೇಕೆ? ಸಂಸದರ ಉದ್ದೇಶವೇನಿತ್ತು? ಯಾವ ಅನಾಹುತ ಸೃಷ್ಟಿಸುವ ಯೋಜನೆ ಇತ್ತು? ನಂತರ ಕ್ಷಮಾಪಣೆ ಕೋರಿ ಹಿಂದಿನ ಸೀಟಿಗೆ ವರ್ಗಾವಣೆಯಾಗಿದ್ದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಸಂಸದ ತೇಜಸ್ವಿ ಸೂರ್ಯ ತುರ್ತು ನಿರ್ಗಮನದ ದ್ವಾರವನ್ನು ವಿಮಾನ ನಿಲ್ದಾಣದಲ್ಲಿ ಅಲ್ಲದೆ, ಟೇಕಾಫ್ ಆದ ನಂತರ ಈ “ಕಪಿಚೇಷ್ಟೆ” ನಡೆಸಿದ್ದಿದ್ದರೆ ಸಂಭವಿಸುವ ಅನಾಹುತಕ್ಕೆ ಯಾರು ಹೊಣೆಯಾಗುತ್ತಿದ್ದರು ನರೇಂದ್ರ ಮೋದಿ ಅವರೇ? ಈ ಬಗ್ಗೆ ತನಿಖೆ ಮಾಡುತ್ತಿಲ್ಲವೇಕೆ? ತೇಜಸ್ವಿ ಸೂರ್ಯ ಸಂಸದನಾಗಿದ್ದು ಮಕ್ಕಳ ಕೈಗೆ ಆಟಿಕೆ ಸಿಕ್ಕಂತಾಗಿದೆ! ಎಂದು ಹರಿಹಾಯ್ದಿದೆ.

Join Whatsapp