ತೇಜಸ್ವಿ ಸೂರ್ಯ, ಮೋಹನದಾಸ್ ಪೈ ಕಾರ್ಪೋರೇಟ್ ಗಳ ಏಜೆಂಟರು: ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಆರೋಪ

Prasthutha|

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯ ತೇಜಸ್ವಿ ಸೂರ್ಯ, ಉದ್ಯಮಿ ಟಿ.ವಿ.ಮೋಹನದಾಸ್ ಪೈ ಅವರು ಕಾರ್ಪೊರೇಟ್ ಸಂಸ್ಥೆಗಳ ಏಜಂಟರು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್.ನಟರಾಜ್ ಶರ್ಮಾ ಆರೋಪಿಸಿದ್ದಾರೆ.

- Advertisement -


ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇವರು ಐಟಿ ಸಂಸ್ಥೆಗಳ ಪರ ಲಾಭಿ ಮಾಡುವ ಮೂಲಕ ಬಡ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇವರ ಜೊತೆಗೆ ಬೆಂಗಳೂರು ನಗರದ ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸೇರಿಕೊಂಡು ಬಡ ಚಾಲಕರು ಹೊಟ್ಟೆ ಮೇಲೆ ಒಡೆಯುತ್ತಿದ್ದಾರೆ. ಇವರ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಸಂದು ಹೇಳಿದರು.


ರಾಜ್ಯದಲ್ಲಿ ೮೦ ಲಕ್ಷ ಮಂದಿ ಈ ಉದ್ಯಮವನ್ನು ನಂಬಿ ಬದುಕುತ್ತಿದ್ದು, ಹಲವಾರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಕೈ ಜೋಡಿಸಿ ಸ್ಥಳೀಯ ಚಾಲಕರನ್ನು ಹತ್ತಿಕ್ಕಲು ಪ್ರಯತ್ನ ನಡೆಸುತ್ತಿದ್ದು, ಇದಕ್ಕೆ ಐಟಿ ಏಜೆಂಟರು ಕೈಜೋಡಿಸಿದ್ದಾರೆ. ಕಾರ್ ಪೂಲಿಂಗ್ ವ್ಯವಸ್ಥೆಗೆ ಚಾಲನೆ ನೀಡುವಂತೆ ತೇಜಸ್ವಿ ಸೂರ್ಯ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಐಟಿ ಕಂಪೆನಿಗಳ ಒತ್ತಾಸೆಯಂತೆ ಅವರು ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದೆ. ೧೧ ಲಕ್ಷ ಚಾಲಕ ಕುಟುಂಬಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ನಟರಾಜ್ ಶರ್ಮಾ ಆಕ್ರೋಶ ವ್ಯಕ್ತಪಡಿಸಿದರು.

- Advertisement -


ಸಂಘಟನೆಯ ಪದಾಧಿಕಾರಿಗಳಾದ ಗಂಡಸಿ ಸದಾನಂದಸ್ವಾಮಿ, ನಾರಾಯಣಸ್ವಾಮಿ, ರಘು ನಾರಾಯಣಗೌಡ, ಜಯಣ್ಣ ಹಾಗೂ ಚಂದ್ರಕುಮಾರ್.ವಿ. ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Join Whatsapp