ಚಿಕ್ಕಮಗಳೂರು: ಕರ್ನಾಟಕ ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರ್ಕಾರವಾಗಿದ್ದರೆ ಕಲ್ಲು ಹೊಡೆಯಬಹುದಿತ್ತು. ಆದರೆ, ನಮ್ಮದೇ ಸರ್ಕಾರ ಇದೆ, ಏನು ಮಾಡೋದು ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮಾತನಾಡಿದ ಆಡಿಯೋ ವೈರಲ್ ಆಗುತ್ತಿದೆ.
ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಜೊತೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ದೂರವಾಣಿ ಕರೆಯಲ್ಲಿ ಕಾರ್ಯಕರ್ತರ ಸಾವು ಜಾಸ್ತಿಯಾಗಿದೆ. ಇದರ ಬಗ್ಗೆ ನಾಯಕರು ಗಮನ ಹರಿಸುತ್ತಿಲ್ಲ ಎಂದ ಸಂದೀಪ್ಗೆ ಉತ್ತರಿಸಿದ ತೇಜಸ್ವಿ ಸೂರ್ಯ, ಹೌದು ನಿಮಗೆಷ್ಟು ಆಕ್ರೋಶವಿದೆ, ನಮಗೂ ಅಷ್ಟೇ ಆಕ್ರೋಶವಿದೆ. ಕಾಂಗ್ರೆಸ್ ಸರ್ಕಾರವಾಗಿದ್ರೆ ಕಲ್ಲು ಹೊಡೆಯಬಹುದಿತ್ತು. ಆದರೆ, ನಮ್ಮದೇ ಸರ್ಕಾರ ಇದೆ. ಏನು ಮಾಡೋದು ಎಂದು ಪ್ರಶ್ನಿಸಿದ್ದಾರೆ.
ಸಾಮೂಹಿಕ ರಾಜೀನಾಮೆ ನೀಡಿರುವ ಕುರಿತು ಮಾತುಕತೆ ನಡೆಸಿದ ತೇಜಸ್ವಿ ಸೂರ್ಯ ಅವರು, ನೀವು ರಾಜೀನಾಮೆ ವಾಪಸ್ ತೆಗೆದುಕೊಳ್ಳಿ. ಎಲ್ಲಾ ಜಿಲ್ಲಾಧ್ಯಕ್ಷರು ಸೇರಿ ಸಿಎಂ ಭೇಟಿ ಮಾಡೋಣ ಎಂದಿದ್ದಾರೆ.
ರಾಜ್ಯದಲ್ಲಿ ಬೀಳುವ ಒಂದೊಂದು ಹೆಣವೂ ಬಿಜೆಪಿಯವರಿಗೆ ರಾಜಕೀಯ ಬೇಳೆ ಎಂದು ನಿನ್ನೆ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದು ಸಂಸದ ತೇಜಸ್ವಿ ಸೂರ್ಯ ಅವರ ಆಡಿಯೋ ಅದನ್ನು ಸ್ಪಷ್ಟೀಕರಿಸುತ್ತಿದೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.