ತೆಲಂಗಾಣ: ಕಾರು ಪಲ್ಟಿಯಾಗಿ ಒಂದೇ ಕುಟುಂಬದ 7 ಮಂದಿ ಸಾವು

Prasthutha|

ಮೇದಕ್: ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಕಾರೊಂದು ಪಲ್ಟಿಯಾಗಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.

- Advertisement -

ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬ ತೂಪ್ರಾಣದಿಂದ ವಾಪಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದಿದೆ. ಅಪಘಾತದಲ್ಲಿ ಮಕ್ಕಳು ಸೇರಿದಂತೆ ಕುಟುಂಬದವರೆಲ್ಲರೂ ಸಾವನ್ನಪ್ಪಿದ್ದಾರೆ.

ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ, ಆದರೆ ದುರದೃಷ್ಟವಶಾತ್, ಕುಟುಂಬದ ಎಲ್ಲಾ ಸದಸ್ಯರು ಗಂಭೀರ ಗಾಯಗಳಿಂದ ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಶಿವಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

- Advertisement -

ಮೇದಕ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಬಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಸ್ತೆ ಅವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಪ್ರಾಣ ಕಳೆದುಕೊಂಡಿರುವುದು ಬೇಸರದ ಸಂಗತಿ ಎಂದರು.



Join Whatsapp