ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಂಗಳವಾರ ಮಧ್ಯರಾತ್ರಿಯ ವೇಳೆ ಕರೀಂನಗರದಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ.
ಸಂಜಯ್ ಕುಮಾರ್ ಅವರನ್ನು ನಲ್ಗೌಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಈ ವೇಳೆ ಬಂಡಿ ಸಂಜಯ್ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಬಂಡಿ ಸಂಜಯ್ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ತೆಲಂಗಾಣದಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಷ್ಟೇ ಕೆಸಿಆರ್ ಸರಕಾರದ ಉದ್ದೇಶವಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ಆರೋಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 8 ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಸಿಕಂದರಾಬಾದ್ನಿಂದ ತಿರುಪತಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಉದ್ಘಾಟಿಸಲಿದ್ದಾರೆ.