ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ಬಿಜೆಪಿ ರಾಜ್ಯಾಧ್ಯಕ್ಷನಿಗೆ ನ್ಯಾಯಾಂಗ ಬಂಧನ

Prasthutha|

ಹೈದರಾಬಾದ್: ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ, ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

ಬಂಡಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗೆ ಸಂಬಂಧಿಸಿದ ಸರ್ಕಾರಿ ಆದೇಶ 317 ರ ವಿರುದ್ಧ ಜಾಗರಣ ದೀಕ್ಷಾ ಎಂಬ ಪ್ರತಿಭಟನಾ ಸಭೆ ಆಯೋಜಿಸಿದ್ದರು.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಿಸಲಾಗಿವೆ ಎಂದು ಕರೀಂನಗರ ಪೊಲೀಸ್ ಆಯುಕ್ತ ಸತ್ಯನಾರಾಯಣ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಒಂದು ಪ್ರಕರಣದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದ ಮತ್ತು ಮಾಸ್ಕ್ ಧರಿಸದಿದ್ದಕ್ಕಾಗಿ 21 ಮಂದಿಗಳು ಮತ್ತು ಇತರರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ ಮತ್ತು ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ವಿರುದ್ಧ ಕನಿಷ್ಠ 70 ಮಂದಿಯನ್ನು ಬಂಧಿಸಲಾಗಿದೆ ಮತ್ತು ನೋಟಿಸ್ ನೀಡಿದ ಬಳಿಕ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

ಮತ್ತೊಂದು ಪ್ರಕರಣದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆಯ ಜೊತೆಗೆ 16 ಮಂದಿಗಳು ಮತ್ತು ಇತರರ ಮೇಲೆ ಗಲಭೆ ಮತ್ತು ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 188, 332, 333, 149, 147 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



Join Whatsapp