ತೆಲಂಗಾಣ: ಜನಗಾಂವ್ ನಲ್ಲಿ ಟಿಆರ್ ಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

Prasthutha|

ಜನಗಾಂವ್ : ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್ ಎಸ್) ಮತ್ತು ಭಾರತೀಯ ಜನತಾ ಪಕ್ಷದ  ನಡುವಿನ ರಾಜಕೀಯ ವೈಷಮ್ಯ ಹಿಂಸಾಚಾರಕ್ಕೆ ತಿರುಗಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಸೋಮವಾರ ಘರ್ಷಣೆ ನಡೆದಿದೆ.

- Advertisement -

ತೆಲಂಗಾಣದ ಜನಗಾಂವ್ ಜಿಲ್ಲೆಯಲ್ಲಿ ಬಿಜೆಪಿಯ ಪಾದಯಾತ್ರೆಯ ಸಮಯದಲ್ಲಿ ಟಿಆರ್ ಎಸ್ , ಬಿಜೆಪಿಯ ನಾಯಕರು ಮತ್ತು ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಕೆಲವು ಬಿಜೆಪಿ ಮತ್ತು ಟಿಆರ್ ಎಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿಯ ಪ್ರಜಾ ಸಂಗ್ರಾಮ ಯಾತ್ರೆಯ ಸಂದರ್ಭದಲ್ಲಿ ಎರಡೂ ಪಕ್ಷಗಳ ನಾಯಕರು ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿ ಕಲ್ಲು ತೂರಾಟ ನಡೆಸಿದ್ದಾರೆ.. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದೇವೆ, ಈಗ ಯಾತ್ರೆ ಶಾಂತಿಯುತವಾಗಿ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp