ಹೈದರಾಬಾದ್: ಹಿಜಾಬ್ ವಿವಾದದ ಕುರಿತಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೇಂದ್ರ ಬಿಜೆಪಿ ಆಡಳಿತದ ಬಗ್ಗೆ ತೆಲಂಗಾಣ ಸಿಎಂ ವ್ಯಾಪಕ ಟೀಕೆಯನ್ನು ವ್ಯಕ್ತಪಡಿಸಿದ್ದಾರೆ. ಹಿಜಾಬ್ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಂತೆಯೇ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಹಿಜಾಬ್ ವಿವಾದ ಕುರಿತು ಮಾತನಾಡಿದ ಅವರು, ಯಾರು ಏನು ಧರಿಸುತ್ತಾರೆ ಎಂಬುದಕ್ಕೂ ಸರ್ಕಾರಕ್ಕೂ ಏನು ಸಂಬಂಧ? ಹಿಜಾಬ್ ವಿವಾದ ಏಕೆ? ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾರ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿತ್ತು. 11 ದಿನಗಳ ವಾದ-ಪ್ರತಿವಾದವನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಇಂದು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ತೀರ್ಪು ಪ್ರಕಟಿಸಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಪರ-ವಿರೋಧದ ಚರ್ಚೆ ಹುಟ್ಟುಕೊಂಡಿದೆ.