ಹೈದರಾಬಾದ್: ಮತದಾನದ ದಿನದಂದು ‘ಮತ ಕೇಳುವ’ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ವಿರುದ್ಧ ಗುರುವಾರ ದೂರು ದಾಖಲಿಸಿದ್ದಾರೆ.
ಇಂದು ಬಂಜಾರಾ ಹಿಲ್ಸ್‌ನ ಡಿಎವಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕವಿತಾ, ಬಿಆರ್ ಎಸ್ ಗೆ ಮತ ಹಾಕುವಂತೆ ಮನವಿ ಮಾಡಿದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ’ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
#WATCH | Telangana Elections | BRS MLC K Kavitha shows her inked finger after casting her vote at a polling booth in Banjara Hills, Hyderabad. pic.twitter.com/JVWNoepC01
— ANI (@ANI) November 30, 2023