Home ಟಾಪ್ ಸುದ್ದಿಗಳು ಕೆಸಿಆರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೆಲಂಗಾಣ ರಾಜ್ಯಪಾಲೆ

ಕೆಸಿಆರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೆಲಂಗಾಣ ರಾಜ್ಯಪಾಲೆ

ಹೈದರಾಬಾದ್: ಮಹಿಳಾ ರಾಜ್ಯಪಾಲರೊಂದಿಗೆ ಹೇಗೆ ತಾರತಮ್ಯ ಮಾಡಲಾಯಿತು ಎಂದು ರಾಜ್ಯವು ಇತಿಹಾಸ ಬರೆಯಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ತೆಲಂಗಾಣ ರಾಜ್ಯಪಾಲೆ ಡಾ.ತಮಿಳಿಸೈ ಸೌಂದರರಾಜನ್ ಅವರು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜಭವನದಲ್ಲಿ  ನಡೆದ  ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸೌಂದರರಾಜನ್, 75 ನೇ ಸ್ವಾತಂತ್ರ್ಯೋತ್ಸವದಂದು ರಾಜ್ಯಪಾಲರ ಭಾಷಣ ಮತ್ತು ಧ್ವಜಾರೋಹಣವನ್ನು ನನಗೆ ನಿರಾಕರಿಸಲಾಯಿತು. ಈಗಲೂ ನಾನು ಎಲ್ಲಿಗೆ ಹೋದರೂ, ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿದರೂ ರಾಜ್ಯ ಸರ್ಕಾರ ಶಿಷ್ಟಾಚಾರವನ್ನು ಅನುಸರಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಕೆಸಿಆರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯಪಾಲರ ಕಚೇರಿಯನ್ನು ಅವಮಾನಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ತಮಿಳಿಸೈ, ರಾಜ್ಯಪಾಲರನ್ನು ಗೌರವಿಸುವುದನ್ನು ಸರ್ಕಾರ ಅರಿತುಕೊಳ್ಳಬೇಕು. ಇಲ್ಲದಿದ್ದರೆ ಸರ್ಕಾರದ ಆದೇಶಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ನಡುವಿನ ಸಂಬಂಧ ಸೌಹಾರ್ದಯುತವಾಗಿಲ್ಲ. ಹಾಗಾಗಿ ರಾಜ್ಯ ಸರ್ಕಾರವು ಶಿಷ್ಟಾಚಾರವನ್ನು ಪಾಲಿಸುತ್ತಿಲ್ಲ ಎಂಬ ಮಾತುಗಳು ಅಲ್ಲಲ್ಲಿ  ಕೇಳಿ ಬರುತ್ತಿವೆ. 

Join Whatsapp
Exit mobile version