ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದ ತೆಲಂಗಾಣ ಜನಸಮಿತಿ

Prasthutha|

- Advertisement -

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಬೆರಳೆಣಿಕೆಯ ದಿನಗಳು ಬಾಕಿ ಇರುವಾಗಲೇ ತೆಲಂಗಾಣ ಜನಸಮಿತಿ (ಟಿಜೆಎಸ್‌) ಸ್ಫರ್ಧೆಯಿಂದ ಹಿಂದೆ ಸರಿದಿದೆ. ತೆಲಂಗಾಣ ಜನಸಮಿತಿ ಅಧ್ಯಕ್ಷ ಕೋದಂಡರಾಮ ಇದನ್ನು ಘೋಷಿಸಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಅದಕ್ಕೂ ಮೊದಲು ತೆಲಂಗಾಣ ಕಾಂಗ್ರೆಸ್ ಘಟಕದ ಅಧ್ಯಕ್ಷ ರೇವಂತ್ ರೆಡ್ಡಿ ಅವರೊಂದಿಗೆ ಸಭೆ ನಡೆಸಿದ್ದರು. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ವಿರುದ್ಧ ವಾಗ್ದಾಳಿ ನಡೆಸಿದ ಕೋದಂಡರಾಮ, ರಾಜ್ಯದಲ್ಲಿ ನಿರಂಕುಶ ಮತ್ತು ಭ್ರಷ್ಟ ಆಡಳಿತವನ್ನು ತೊಲಗಿಸಬೇಕು. ಅದಕ್ಕಾಗಿಯೇ ಸಮಾನ ಮನಸ್ಥಿತಿಯ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡಿರುವುದಾಗಿ ತಿಳಿಸಿದ್ದಾರೆ.

- Advertisement -

ನಿರುದ್ಯೋಗ ನಿವಾರಣೆ ಮತ್ತು ರಾಜ್ಯದ ಅಭಿವೃದ್ಧಿ ಕುರಿತು ಕಾಂಗ್ರೆಸ್‌ ನೀಡಿರುವ ಭರವಸೆಗಳ ಬಗ್ಗೆ ಕೋದಂಡರಾಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

119 ಸ್ಥಾನಗಳ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಫಲಿತಾಂಶ ಹೊರಬೀಳಲಿದೆ.



Join Whatsapp