Home ಟಾಪ್ ಸುದ್ದಿಗಳು ತೆಲಂಗಾಣ: 20ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಗುಂಡಿಕ್ಕಿ ಹತ್ಯೆ

ತೆಲಂಗಾಣ: 20ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಗುಂಡಿಕ್ಕಿ ಹತ್ಯೆ

ಹೈದರಾಬಾದ್: ಅಪರಿಚಿತ ವ್ಯಕ್ತಿಗಳು ಸುಮಾರು 20ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ತೆಲಂಗಾಣದ ಮಹಬೂಬ್ ನಗರ ಜಿಲ್ಲೆಯ ಪೊನ್ನಕಲ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 429 (ಪ್ರಾಣಿಗಳನ್ನು ಕೊಲ್ಲುವುದು ಅಥವಾ ಅಂಗವಿಕಲಗೊಳಿಸುವುದು), ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಇತರೆ ಕಾಯ್ದೆಯಡಿ ಅಡ್ಡಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಸ್ಥಳೀಯರು ನೀಡಿದ ದೂರು ಆಧರಿಸಿ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version