ಏಪ್ರಿಲ್- ಜೂನ್ ತನಕ ರಾಜ್ಯದ ಹಲವೆಡೆ ತಾಪಮಾನ ಏರಿಕೆ

Prasthutha|

ಬೆಂಗಳೂರು: ದೇಶಾದ್ಯಂತ ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗಕ್ಕೆ ಭಾರತೀಯ ಹವಾಮಾನ ಇಲಾಖೆ ಬಿರು ಬಿಸಿಗಾಳಿಯ ಎಚ್ಚರಿಕೆ ನೀಡಿದೆ.

- Advertisement -


ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರವಾದ ಬೇಸಿಗೆ ಅನುಭವಿಸಲಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತ ಕೆಟ್ಟ ಪರಿಣಾಮ ಎದುರಿಸುವ ನಿರೀಕ್ಷೆಯಿದೆ.


ಕರ್ನಾಟಕವು ಏಪ್ರಿಲ್ ನಲ್ಲಿ ಸಾಮಾನ್ಯದ 1 ರಿಂದ 3 ದಿನಗಳ ಬದಲು 2 ರಿಂದ 8 ದಿನ ಉಷ್ಣ ಅಲೆಯನ್ನು ಅನುಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ಬಯಲು ಸೀಮೆಯ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆ ಬೀಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ದೇಶಾದ್ಯಂತ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಎಚ್ವರಿಕೆ ವಹಿಸುವಂತೆ ಸೂಚನೆ ನೀಡಿದೆ.



Join Whatsapp