ಚಿಕ್ಕಮಗಳೂರು: ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

Prasthutha|

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

- Advertisement -

ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಚಿಕ್ಕಮಗಳೂರು ಇವರ ಆದೇಶದಂತೆ ಮೂಡಿಗೆರೆ ವಲಯ ಅರಣ್ಯ ಅಧಿಕಾರಿಗಳ ಕಛೇರಿಯಿಂದ ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ.

ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಅತಿಯಾಗಿ ಮಳೆಯಾಗುತ್ತಿರುವುದರಿಂದ, ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸುತ್ತಿರುವುದರಿಂದ, ರಸ್ತೆಬದಿಯ ವಿದ್ಯುತ್ ಕಂಬಗಳು, ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿರುವುದರಿಂದ, ಹಾಗೆಯೇ ಪೋಟೋ ತೆಗೆಯುವ ಸಂದರ್ಭದಲ್ಲಿ ಅಪಾಯಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ಅಪಾಯ ಸಂಭವಿಸಿದಾಗ ಸಂದರ್ಭದಲ್ಲಿ ತುರ್ತಾಗಿ ಘಟನಾ ಸ್ಥಳಕ್ಕೆ ತೆರಳಲು ಕಷ್ಟಸಾಧ್ಯವಾಗಿರುತ್ತದೆ.

- Advertisement -

ಆದ್ದರಿಂದ ಮುಂಜಾಗೃತ ಕ್ರಮವಾಗಿ ಯಾವುದೇ ರೀತಿಯ ಪ್ರಾಣಹಾನಿ ಮತ್ತು ಅಪಾಯ ಉಂಟಾಗದಂತೆ ತಡೆಗಟ್ಟುವ ಹಿತದೃಷ್ಟಿಯಿಂದ ಎತ್ತಿನಭುಜಕ್ಕೆ ಚಾರಣ ಹೋಗುವುದನ್ನು ಮುಂದಿನ ಆದೇಶದ ವರೆಗೂ ತಡೆಹಿಡಿಯಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ.

Join Whatsapp