Home Uncategorized ದ.ಕ ಜಿಲ್ಲೆಯಾದ್ಯಂತ ಜಾನುವಾರುಗಳ ಸಾಗಾಟಕ್ಕೆ ತಾತ್ಕಾಲಿಕ ನಿಷೇಧ

ದ.ಕ ಜಿಲ್ಲೆಯಾದ್ಯಂತ ಜಾನುವಾರುಗಳ ಸಾಗಾಟಕ್ಕೆ ತಾತ್ಕಾಲಿಕ ನಿಷೇಧ

ಮಂಗಳೂರು: ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದೆ.ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಇದು ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ.20 ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

ಜೊತೆಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್ ಮಾಡುವಂತೆ ಅವರು ಸಂಬಂಧಿಸಿದವರಿಗೆ ಸೂಚಿಸಿರುತ್ತಾರೆ.

Join Whatsapp
Exit mobile version