Home ಟಾಪ್ ಸುದ್ದಿಗಳು ಸಿಎಂಗೆ ತಾತ್ಕಾಲಿಕ ರಿಲೀಫ್: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

ಸಿಎಂಗೆ ತಾತ್ಕಾಲಿಕ ರಿಲೀಫ್: ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

ಮಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊಂಚ ರಿಲೀಫ್ ಸಿಕ್ಕಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.


ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.


ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನ್ನ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನೆ ಮಾಡಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.

ಸೋಮವಾರ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ವಿಚಾರಣೆಯನ್ನು ಆಗಸ್ಟ್ 29 ಕ್ಕೆ ಮುಂದೂಡಿದೆ. ಇದರ ಜೊತೆಗೆ ಆ29ರ ವರೆಗೂ ವಿಚಾರಣಾ ನ್ಯಾಯಾಲಯಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ತೀರ್ಪು ನೀಡುವಂತಿಲ್ಲ ಎಂದು ಹೇಳಿದೆ.

ಹೈಕೋರ್ಟ್ ನಲ್ಲಿ ಮುಂದಿನ ವಿಚಾರಣೆಯ ದಿನಾಂಕದವರೆಗೆ ರಾಜ್ಯಪಾಲರ ಅನುಮತಿಯ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಂತೆ ಉಚ್ಛ ನ್ಯಾಯಾಲಯವು ವಿಚಾರಣಾ ನ್ಯಾಯಾಲಯಗಳಿಗೆ ಸೂಚಿಸಿದೆ.

Join Whatsapp
Exit mobile version