ಬೆಂಗಳೂರು: ಮಂಗಳವಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿತ್ತು. ಇದನ್ನು ಜಾರಿಗೆ ತರುವುದಾಗಿಯೂ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಆದರೆ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ವಿಧೇಯಕಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ಸಿಎಂ ಸಿದ್ಧರಾಮಯ್ಯ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಾಲಗಿದ್ದು, ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ತಿಳಿಸಲಾಗಿದೆ.