ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಕೋವಿಡ್ ಪಾಸಿಟಿವ್

Prasthutha|

ಮಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಹತ್ತು ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಕೊರೋನಾ ದೃಢಪಟ್ಟಿದೆ.

- Advertisement -

ಸೋಂಕಿನಿಂದ ಬಳಲುತ್ತಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಸಿಬ್ಬಂದಿಗಳು ಹೋಂ ಐಸೋಲೇಷನ್ ಗೆ ಒಳಗಾಗಿದ್ದಾರೆ.

ಸಿಬ್ಬಂದಿಗಳ ಕುಟುಂಬಕ್ಕೆ ಇಲಾಖೆಯಿಂದ ಸಹಕಾರ ನೀಡಲಾಗುತ್ತಿದೆ. ಯಾವುದೇ ಸಮಸ್ಯೆ ಇಲ್ಲದೆ ಸಿಬ್ಬಂದಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಕುಮಾರ್ ಎನ್ ಮಾಹಿತಿ ನೀಡಿದ್ದಾರೆ.



Join Whatsapp