ನವದೆಹಲಿ: ಒಕ್ಕೂಟ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಆಂದೋಲನ ಹತ್ತು ತಿಂಗಳು ಕಳೆದಿದೆ. ಈ ನಿಟ್ಟಿನಲ್ಲಿ ಹರ್ಯಾಣ ಸರ್ಕಾರ ರೈತರು ದೆಹಲಿಯ ಪರ್ಯಾಯ ಮಾರ್ಗಗಳನ್ನು ಪ್ರತಿಭಟನೆಗೆ ಸೂಚಿಸಿದ್ದು, ಈ ರಸ್ತೆಗಳನ್ನು ದುರಸ್ತಿ ಮಾಡುವುದಾಗಿ ಘೋಷಿಸಿವೆ.
ರೈತರು ದೆಹಲಿ ಮತ್ತು ಹರ್ಯಾಣದ ಕುಂಡ್ಲಿ-ಸಿಂಘು, ಟಿಕ್ರಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಲ್ಲಿಗೆ ಸಮೀಪದ ರಸ್ತೆಗಳನ್ನು ಸರ್ಕಾರ ತಡೆದು ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಿದೆ. ಪ್ರಸಕ್ತ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರ ರೈತರನ್ನು ಮಾತುಕತೆಗೆ ಆಹ್ವಾನಿಸಿದ್ದು, ರೈತರು ಆಹ್ವಾನವನ್ನು ತಿರಸ್ಕರಿಸಿದ್ದಾರೆ.
ಸೆಪ್ಟೆಂಬರ್ 22 ರಂದು ಹರ್ಯಾಣದ ಗೃಹ ಸಚಿವ ಅನಿಲ್ ವಿಜ್ ಅವರು ಸೋನಿಪತ್ ಮತ್ತು ಜಜ್ಜರ್ ಪ್ರದೇಶಗಳಲ್ಲಿ ಪರ್ಯಾಯ ಮಾರ್ಗಗಳನ್ನು ದುರಸ್ತಿ ಮಾಡಿ ಪ್ರತಿಭಟನೆಗೆ ಸಜ್ಜುಗೊಳಿಸಲಾಗುವುದೆಂದು ತಿಳಿಸಿದ್ದಾರೆ.