ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಾಣ ಮಾಡಲು ಶೀಘ್ರದಲ್ಲೇ ಟೆಂಡರ್ : ಆನಂದ್ ಸಿಂಗ್

Prasthutha|

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ರೋಪ್ ವೇ ನಿರ್ಮಾಣ ಮಾಡಲು ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.

- Advertisement -

ನಂದಿಗಿರಿಧಾಮದಲ್ಲಿಂದು ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರು ಸೇರಿದಂತೆ ಪರಿಸರಕ್ಕೆ ಯಾವುದೇ ಹಾನಿಯಾಗಂತೆ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.

ರೋಪ್ ವೇ ನಿರ್ಮಾಣಕ್ಕೆ ಇನ್ನು ಒಂದು ತಿಂಗಳೊಳಗೆ ಟೆಂಡರ್ ಕರೆದು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಮನರಂಜನೆ ಹಾಗೂ ಸ್ಥಳೀಯ ಕಲಾವಿದರಿಗೆ ಉದ್ಯೋಗವಕಾಶ ಒದಗಿಸುವ ದೃಷ್ಟಿಯಿಂದ ಕಲಾಧಾಮವೊಂದನ್ನು ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

- Advertisement -

ಗಿರಿಧಾಮದಲ್ಲಿ ವಾಹನದಟ್ಟಣೆ ಸಮಸ್ಯೆ ನಿಯಂತ್ರಿಸಲು ಡಬಲ್ ಡೆಕ್ ರೀತಿಯ ವಾಹನಗಳ ವ್ಯವಸ್ಥೆ ಮಾಡಲಾಗುವುದು. ಪ್ರವಾಸಿಗರು ಈ ವಾಹನಗಳಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು ಎಂದು ಸಚಿವರು ಹೇಳಿದರು.

Join Whatsapp