ನಗರ್ತಪೇಟೆಯಲ್ಲಿ ಉದ್ವಿಗ್ನ ವಾತಾವರಣ

Prasthutha|

ಬೆಂಗಳೂರು: ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ನಗರ್ತಪೇಟೆಯಲ್ಲಿ ಬಿಜೆಪಿ, ಹಿಂದೂ ಜಾಗರಣಾ ವೇದಿಕೆ ಹಾಗೂ ಬಜರಂಗದಳದ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಉದ್ವಿಗ್ನ ವಾತಾವರಣಕ್ಕೆ ಕಾರಣವಾಗಿತ್ತು.

- Advertisement -

ಪ್ರತಿಭಟನಕಾರರು ಹಾಗೂ ಪೊಲೀಸರು ನಡುವೆ ವಾಗ್ವಾದ ಹಾಗೂ ತಳ್ಳಾಟ ನಡೆದಿದೆ. ಕೇಸರಿ ಶಾಲು ಹಾಗೂ ಭಗವಾಧ್ವಜ ಹಿಡಿದು ಬಂದಿದ್ದ ಕಾರ್ಯಕರ್ತರು, ಜೈಶ್ರೀರಾಮ್‌ ಘೋಷಣೆ ಕೂಗುತ್ತಾ ರ್‍ಯಾಲಿ ನಡೆಸಿದ್ದಾರೆ.

‘ಭಾನುವಾರ ಸಂಜೆ 6.30ರ ಸುಮಾರಿಗೆ ಕಬ್ಬನ್‌ಪೇಟೆಯ ಸಿದ್ದಣ್ಣಗಲ್ಲಿಯ ಕೃಷ್ಣ ಟೆಲಿಕಾಮ್‌ನ ಮಾಲೀಕ ಮುಖೇಶ್‌(26) ಎಂಬುವವರು ಹಲ್ಲೆ ನಡೆಸಲಾಗಿತ್ತು. ಹನುಮಾನ್ ಚಾಲೀಸಾ ಹಾಕಿದಕ್ಕಾಗಿ ಈ ಹಲ್ಲೆ ನಡೆದಿದೆಯೆಂದು ಆರೋಪಿಸೊ ಸಂಘಪರಿವಾರದಿಂದ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳನ್ನು ರಕ್ಷಣೆ ಮಾಡಲಾಗುತ್ತಿದೆ ಎಂದು ಇಂದು ಪ್ರತಿಭಟನಕಾರರು ಕಿಡಿ ಕಾರಿದ್ದಾರೆ.

- Advertisement -

ಕೇಂದ್ರ ಸಚಿವೆ ಶೋಬಾ ಕರಂದ್ಲಾಜೆ, ಶಾಸಕ ಎಸ್‌.ಸುರೇಶ್‌ಕುಮಾರ್‌, ಸಂಸದ ತೇಜಸ್ವಿ ಸೂರ್ಯ ಅವರು ಸ್ಥಳಕ್ಕೆ ಬಂದು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಪೊಲೀಸರ ವಿರುದ್ಧ ಆಕ್ರೋಶ ಹೆಚ್ಚುತ್ತಿದ್ದಂತೆಯೇ ಸ್ಥಳಕ್ಕೆ ವಿವಿಧ ವಿಭಾಗಗಳಿಂದ ಹೆಚ್ಚಿನ ಪೊಲೀಸ್‌ ಸಿಬ್ಬಂದಿ ಕರೆಸಿಕೊಂಡು ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ನಡೆಸಲಾಯಿತಾದರೂ ವಿಫಲವಾಗಿತ್ತು.

ಉಳಿದ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ ಮೇಲೆ ಪ್ರತಿಭಟನೆ ಕೈಬಿಡಲಾಯಿತು.

Join Whatsapp