ಭೀಕರ ಅಪಘಾತ: 6 ಮಂದಿ ಮೃತ್ಯು

Prasthutha|

ಆಂಧ್ರ ಪ್ರದೇಶ: ಆಟೋ- ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ಇಂದು ಸಂಭವಿಸಿದೆ.

- Advertisement -

ದಾಚೇಪಲ್ಲಿ ಮಂಡಲ್‌ ನ ಪೊಂಡುಗುಲಾ ಎಂಬಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಆರು ಜನ ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಾಳುಗಳನ್ನು ಪಲ್ನಾಡು ಜಿಲ್ಲೆಯ ಗುರ್ಜಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Join Whatsapp