ಭೀಕರ ರಸ್ತೆ ಅಪಘಾತ: ಗಂಗಾ ಸ್ನಾನಕ್ಕೆ ತೆರಳುತ್ತಿದ್ದ 12 ಮಂದಿ ಭಕ್ತರು ಮೃತ್ಯು

Prasthutha|

ಲಕ್ನೋ: ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಟ್ರಕ್ ಆಟೋಗೆ ಡಿಕ್ಕಿ ಹೊಡೆದು 12 ಭಕ್ತರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -

ಅಲ್ಹಾಗಂಜ್ ಪೊಲೀಸ್ ಠಾಣೆ ಪ್ರದೇಶದ ಬರೇಲಿ-ಫರೂಕಾಬಾದ್ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಲಾರಿಗೆ 12 ಭಕ್ತರನ್ನು ತುಂಬಿಸಿದ್ದ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ. ಶಹಜಹಾನ್ಪುರದ ಮದ್ನಾಪುರ ಪ್ರದೇಶದ ದಮ್ಗಡಾ ಗ್ರಾಮದಿಂದ ಗಂಗಾ ನದಿಯಲ್ಲಿ ಸ್ನಾನ ಮಾಡಲು 12 ಭಕ್ತರು ಒಂದೇ ಆಟೋದಲ್ಲಿ ತೆರಳುತ್ತಿದ್ದರು. ಆ ಆಟೋಗೆ ಟ್ರಕ್ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ 12 ಭಕ್ತರೂ ಸಾವನ್ನಪ್ಪಿದ್ದಾರೆ.

ಬೆಳಿಗ್ಗೆ 10: 30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

- Advertisement -

ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಡಿಎಂ ಉಮೇಶ್ ಪ್ರತಾಪ್ ಸಿಂಗ್, ಎಸ್ಪಿ ಅಶೋಕ್ ಕುಮಾರ್ ಮೀನಾ ಮತ್ತು ಜಲಾಲಾಬಾದ್ ಶಾಸಕ ಹರಿಪ್ರಕಾಶ್ ವರ್ಮಾ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆಯಲಾಗಿದೆ. ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Join Whatsapp