ಪಾಕಿಸ್ತಾನದ ವಿರುದ್ಧದ ದಾಳಿಗೆ ಅಮೆರಿಕದ ಶಸ್ತ್ರಾಸ್ತ್ರ ಬಳಸುತ್ತಿರುವ ಭಯೋತ್ಪಾದಕರು: ಪ್ರಧಾನಿ ಕಾಕರ್

Prasthutha|

ಇಸ್ಲಾಮಾಬಾದ್: ಭಯೋತ್ಪಾದಕರು ಅಮೆರಿಕ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಪಾಕಿಸ್ತಾನ ವಿರುದ್ಧದ ದಾಳಿಗೆ ಬಳಸುತ್ತಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

- Advertisement -

ಭಯೋತ್ಪಾದಕರು ತಮ್ಮ ದೇಶದ ವಿರುದ್ಧ ಅಮೆರಿಕ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದಾರೆ. ಅಮೆರಿಕ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಪಾಕಿಸ್ತಾನದಲ್ಲಿ ಮಾತ್ರವಲ್ಲದೇ ಈ ಪ್ರದೇಶದಾದ್ಯಂತ ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿಯೂ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಪಾಕಿಸ್ತಾನದ ಉಸ್ತುವಾರಿ ಪ್ರಧಾನಿ ಅನ್ವರ್-ಉಲ್-ಹಕ್ ಕಾಕರ್ ಹೇಳಿದ್ದಾರೆ., ಪಾಕಿಸ್ತಾನದಲ್ಲಿ ಭಯೋತ್ಪಾದನೆಗೆ ಅಮೆರಿಕದ ಶಸ್ತ್ರಾಸ್ತ್ರಗಳನ್ನು ಬಳಸಲಾಗುತ್ತಿದೆ ಎಂಬ ಬಗ್ಗೆ ಇಸ್ಲಾಮಾಬಾದ್ ತನ್ನ ನಿಲುವಿಗೆ ದೃಢವಾಗಿ ನಿಂತಿದೆ ಎಂದು ಒತ್ತಿ ಹೇಳಿದ್ದಾರೆ.

ಪಾಕಿಸ್ತಾನ ವಾಯುಪಡೆಯ ತರಬೇತಿ ನೆಲೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಕನಿಷ್ಠ 17 ಪಾಕಿಸ್ತಾನಿ ಸೈನಿಕರನ್ನು ಕೊಂದು ಹಾಕಿದ ಕೆಲ ದಿನಗಳ ನಂತರ ಪತ್ರಿಕಾಗೋಷ್ಠಿಯಲ್ಲಿ ಯುಎಸ್ ಸ್ಟೇಟ್ ಡಿಪಾರ್ಟ್​ಮೆಂಟ್​ನ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ನೀಡಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕಾಕರ್ ಈ ಹೇಳಿಕೆ ನೀಡಿದ್ದಾರೆ.

Join Whatsapp