ಕೆರ್ವಿಲ್ಲೆ (ಟೆಕ್ಸಾಸ್): ಅಮೆರಿಕದ ಟೆಕ್ಸಾಸ್ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 100 ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 4ರಂದು ಸುರಿದ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿತ್ತು. ಹಲವು ಪ್ರದೇಶಗಳಲ್ಲಿ ನಾಪತ್ತೆಯಾದವರ ಪತ್ತೆಯಾಗಿ ರಕ್ಷಣಾ ಕಾರ್ಯಾಚರಣೆ ಈಗಲೂ ಮುಂದುವರಿದಿದೆ.
ಟೆಕ್ಸಾಸ್‌ನ ಹಲವು ಕಡೆಗಳಲ್ಲಿ ಮಳೆಯಾಗುತ್ತಿರುವುದರಿಂದಾಗಿ ಮತ್ತಷ್ಟು ಪ್ರವಾಹ ಭೀತಿ ಎದುರಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ದಶಕದಲ್ಲೇ ಸಂಭವಿಸಿದ ಅತ್ಯಂತ ಭೀಕರ ಪ್ರವಾಹಗಳಲ್ಲಿ ಇದೂ ಒಂದಾಗಿದೆ.
