Home ಟಾಪ್ ಸುದ್ದಿಗಳು ಬೌದ್ಧ, ಜೈನ ಧರ್ಮಗಳ ಪರಿಚಯ ಪಾಠ ಕೈಬಿಡುವುದಿಲ್ಲ : ಸಚಿವ ಸುರೇಶ್ ಕುಮಾರ್

ಬೌದ್ಧ, ಜೈನ ಧರ್ಮಗಳ ಪರಿಚಯ ಪಾಠ ಕೈಬಿಡುವುದಿಲ್ಲ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಆರನೇ ತರಗತಿಯ ಸಮಾಜ ವಿಜ್ಞಾನದ ಪಠ್ಯ ಪುಸ್ತಕದಿಂದ ಬೌದ್ಧ ಮತ್ತು ಜೈನ ಧರ್ಮಗಳ ಪರಿಚಯ ಪಾಠಗಳನ್ನು ಕೈಬಿಟ್ಟಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

“ಬೌದ್ಧ ಧರ್ಮ ಮತ್ತು ಜೈನ ಧರ್ಮದ ಕುರಿತ ಪಾಠವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ತಪ್ಪು ಗ್ರಹಿಕೆಯಿಂದ ಈ ಸುದ್ದಿಗಳು ಬಂದಿವೆ” ಎಂದು ಅವರು ಹೇಳಿದ್ದಾರೆ.

ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ -1ರ ಪಾಠದ ಪೀಠಿಕಾ ರೂಪದ ವಿವರಣೆಯಲ್ಲಿ ಅನಗತ್ಯ ಮತ್ತು ಆರನೇ ತರಗತಿಯ ಮಕ್ಕಳ ವಯೋಮಾನಕ್ಕೆ ಮೀರಿದ ಪಠ್ಯಾಂಶ ಇದೆ ಎಂಬ ಅನೇಕರ ಅಭಿಪ್ರಾಯಗಳಿಗೆ ಪೂರಕವಾಗಿ ಅದನ್ನು ಕೈಬಿಡಲು ನಿರ್ಧರಿಸಿ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಬೌದ್ಧ, ಜೈನ ಧರ್ಮಗಳ ಪರಿಚಯ ಪಾಠಗಳಿಗೆ ಕೊಕ್ ನೀಡಿಲ್ಲ.  ಪಾಠಗಳು ಪೂರ್ಣವಾಗಿ ಇವೆ, ಇರುತ್ತವೆ ಎಂದು ಅವರು ತಿಳಿಸಿದ್ದಾರೆ.

ಯಾವುದೇ ಧರ್ಮದ ಪರಿಚಯ ಪಾಠಗಳಿಗೆ ಕೊಕ್ ನೀಡಲಾಗಿಲ್ಲ. ಅನಗತ್ಯ ವಿವಾದ ಹುಟ್ಟುಹಾಕುವ ಅವಶ್ಯಕತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ.

Join Whatsapp
Exit mobile version