ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಕವಿತೆ ಹಿಂಪಡೆದ ಕವಿ ಎಸ್‌ ಜಿ ಸಿದ್ದರಾಮಯ್ಯ

Prasthutha|

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ತಮ್ಮ ಕವಿತೆಯನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಎಸ್.ಜಿ. ಸಿದ್ದರಾಮಯ್ಯ ಹಿಂಪಡೆದಿದ್ದಾರೆ.

- Advertisement -

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಜಿ.ರಾಮಕೃಷ್ಣ ಹಾಗೂ ದೇವನೂರ ಮಹದೇವ ಮುಂತಾದವರು ತಾವು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದರು. ಇದೀಗ ಈ ಸಾಲಿಗೆ ಕವಿ ಎಸ್.ಜಿ. ಸಿದ್ದರಾಮಯ್ಯ ಅವರೂ ಸೇರಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಪತ್ರ ಬರೆದಿರುವ ಕವಿ ಸಿದ್ದರಾಮಯ್ಯ, ‘ಮನೆಗೆಲಸದ ಹೆಣ್ಣುಮಗಳು’ ಎಂಬ ನನ್ನ ಕವಿತೆ 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿ ಸೇರಿದೆ. ಅದನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇನೆ‘ ಎಂದು ತಿಳಿಸಿದರು.

Join Whatsapp