Home ಟಾಪ್ ಸುದ್ದಿಗಳು ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಕವಿತೆ ಹಿಂಪಡೆದ ಕವಿ ಎಸ್‌ ಜಿ ಸಿದ್ದರಾಮಯ್ಯ

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಕವಿತೆ ಹಿಂಪಡೆದ ಕವಿ ಎಸ್‌ ಜಿ ಸಿದ್ದರಾಮಯ್ಯ

ಬೆಂಗಳೂರು: ಪಠ್ಯ ಪುಸ್ತಕದಲ್ಲಿ ತಮ್ಮ ಕವಿತೆಯನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಎಸ್.ಜಿ. ಸಿದ್ದರಾಮಯ್ಯ ಹಿಂಪಡೆದಿದ್ದಾರೆ.

ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಜಿ.ರಾಮಕೃಷ್ಣ ಹಾಗೂ ದೇವನೂರ ಮಹದೇವ ಮುಂತಾದವರು ತಾವು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದರು. ಇದೀಗ ಈ ಸಾಲಿಗೆ ಕವಿ ಎಸ್.ಜಿ. ಸಿದ್ದರಾಮಯ್ಯ ಅವರೂ ಸೇರಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರಿಗೆ ಪತ್ರ ಬರೆದಿರುವ ಕವಿ ಸಿದ್ದರಾಮಯ್ಯ, ‘ಮನೆಗೆಲಸದ ಹೆಣ್ಣುಮಗಳು’ ಎಂಬ ನನ್ನ ಕವಿತೆ 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿ ಸೇರಿದೆ. ಅದನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇನೆ‘ ಎಂದು ತಿಳಿಸಿದರು.

Join Whatsapp
Exit mobile version