ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ: ಸಿ ಎಂ ಬೊಮ್ಮಾಯಿ

Prasthutha|

ಬೆಂಗಳೂರು: ಇಂದು ರಾಜ್ಯಾದ್ಯಂತ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ಶಾಲೆಗೆ ಆಗಮಿಸಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ನಂತರ ಶಾಲೆ ಆರಂಭವಾಗುತ್ತಿದೆ. ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಒಳ್ಳೆಯ ವಾತಾವರಣ ನಿರ್ಮಾಣವಾಗಲಿ ಎನ್ನುವ ಆಶಯ ನಮ್ಮದು. ಶಾಲೆಯಲ್ಲಿಯೇ ಕಲಿತಾಗ ಮಕ್ಕಳಿಗೆ ಒಳ್ಳೆಯ ಪರಿಣಾಮ ಆಗುತ್ತದೆ ಎಂದು ಹೇಳಿದರು.

 ಶೀಘ್ರದಲ್ಲಿಯೇ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಿಸಲಾಗುತ್ತದೆ ಎಂದು ಭರವಸೆ ನೀಡಿದರು.

Join Whatsapp