ಚಂಡೀಗಡ: ಜೀವಂತವಾಗಿ ಭಟಿಂಡಾ ವಿಮಾನ ನಿಲ್ದಾಣಕ್ಕೆ ಬರಲು ಸಾಧ್ಯವಾಗಿದ್ದಕ್ಕೆ ಪಂಜಾಬ್ ಮುಖ್ಯಮಂತ್ರಿಗೆ ಕೃತಜ್ಞತೆಗಳು ಎಂದು ಪ್ರಧಾನಿ ಮೋದಿ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.
ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ನೇತೃತ್ವದಲ್ಲಿ ರೈತರು ಮಾರ್ಗದ ನಡುವೆಯೇ ತಮ್ಮನ್ನು ತಡೆದು ಪ್ರತಿಭಟಿಸಿದ ಬಳಿಕ ಪ್ರಧಾನಿ ಈ ಮೇಲಿನ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ವಿವಾದಿಯ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದ ನಂತರ ಪಧಾನಿ ಮೋದಿಯ ಮೊದಲ ಪಂಜಾಬ್ ಭೇಟಿಯಾಗಿದೆ. ಈ ವೇಳೆ ಕನಿಷ್ಠ ಬೆಂಬಲ ಬೆಲೆ ವಿಚಾರದಲ್ಲಿ ಕೇಂದ್ರ ಮೌನವಹಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರ ಜಾಥಾಕ್ಕೆ ತಡೆ ನೀಡಲು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಸದಸ್ಯರು ಕರೆ ನೀಡಿದ್ದರು.
ಹುಸೇನಿ ವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ತೆರಳಬೇಕಾಗಿದ್ದ ಪ್ರಧಾನಿ ಮೋದಿಯವರ ಬೆಂಗಾವಲು ವಾಹನವನ್ನು ಪ್ರತಿಭಟನಾಕಾರರು ತಡೆದು ನಿಲ್ಲಿಸಿದ್ದರು. ಇದರಿಂದ ಪ್ರಧಾನಿ ಮೋದಿ ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿ ದೆಹಲಿಗೆ ವಾಪಸಾಗಿದ್ದರು.