Home ಟಾಪ್ ಸುದ್ದಿಗಳು ಬಿಜೆಪಿಯನ್ನು ಸೋಲಿಸಿದರೆ ತೈಲ ಬೆಲೆ ಇಳಿಯುತ್ತದೆ ಎನ್ನುವ ಪಾಠ ಹೇಳಿಕೊಟ್ಟ ಮೋದಿಗೆ ಧನ್ಯವಾದ: ಸಿದ್ದರಾಮಯ್ಯ

ಬಿಜೆಪಿಯನ್ನು ಸೋಲಿಸಿದರೆ ತೈಲ ಬೆಲೆ ಇಳಿಯುತ್ತದೆ ಎನ್ನುವ ಪಾಠ ಹೇಳಿಕೊಟ್ಟ ಮೋದಿಗೆ ಧನ್ಯವಾದ: ಸಿದ್ದರಾಮಯ್ಯ


ಬೆಂಗಳೂರು : ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.


ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ. ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ. ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು. ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Join Whatsapp
Exit mobile version