Home ಟಾಪ್ ಸುದ್ದಿಗಳು ಜೂನ್ 1 ರಿಂದ ಶೈಕ್ಷಣಿಕ ವರ್ಷ ಪ್ರಾರಂಭಿಸಬೇಕು: ಬಸವರಾಜ ಹೊರಟ್ಟಿ

ಜೂನ್ 1 ರಿಂದ ಶೈಕ್ಷಣಿಕ ವರ್ಷ ಪ್ರಾರಂಭಿಸಬೇಕು: ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಉರಿಬಿಸಿಲು ಹೆಚ್ಚಿರುವುದರಿಂದ ಶಾಲೆಗಳನ್ನು ಮೇ 15ರ ಬದಲಾಗಿ, ಜೂನ್ 1 ರಿಂದ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಮಕ್ಕಳ  ಆರೋಗ್ಯದ ಹಿತದೃಷ್ಟಿಯಿಂದ ಜೂನ್ 1 ರಿಂದ ಶಾಲೆಗಳನ್ನು ಆರಂಭಿಸಬೇಕು. ಕಡಿಮೆ ಬೀಳುವ ಶೈಕ್ಷಣಿಕ ದಿನಗಳಲ್ಲಿ ಪ್ರತಿ ಶನಿವಾರ ಹೆಚ್ಚುವರಿ ತರಗತಿ ನಡೆಸುವ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ’ ಎಂದು ಅವರು ತಿಳಿಸಿದರು.

‘ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಮೇ 16 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿರುವುದು ಎಳೆಯ ಮಕ್ಕಳ ಪಾಲಕರಿಗೆ ನುಂಗಲಾರದ ತುತ್ತಾಗಿದೆ. ಶಾಲೆ ಆರಂಭಿಸಿದರೂ, ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಸಿದ್ಧರಿಲ್ಲ. ಶಾಲೆ ಆರಂಭಿಸಿದರೆ, ಮಕ್ಕಳು ಬಿಸಿಲಿನ ತಾಪಕ್ಕೆ  ಒಳಗಾಗಬಹುದು’ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು.

Join Whatsapp
Exit mobile version