ಪೊಲೀಸರಿಂದ ತಪ್ಪಿಸಿಕೊಳ್ಳಲು ಜೀಪ್’ನಿಂದ ಬಿದ್ದ ಆರೋಪಿ ಸಾವು

Prasthutha|

ಚಾಮರಾಜನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯೊಬ್ಬ ಪೊಲೀಸ್ ಜೀಪ್ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಕುಂತೂರು ಮೋಳೆ ಗ್ರಾಮದ ನಿಂಗರಾಜು (24) ಮೃತ ಆರೋಪಿ. ಅಪ್ರಾಪ್ತೆಯ ಅಪಹರಣ ಪ್ರಕರಣದಲ್ಲಿ ನಿಂಗರಾಜು ಆರೋಪಿಯಾಗಿದ್ದು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಜೀಪ್’ನಿಂದ ನೆಗೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಜೀಪ್’ನಿಂದ ನೆಗೆದ ಬಳಿಕ ಗಂಭೀರ ಗಾಯಗಳಾಗಿದ್ದರಿಂದ ಯಳಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

Join Whatsapp