ಮಂಗಳೂರು: ಬಜರಂಗದಳ ಕಾರ್ಯಕರ್ತರಿಂದ ಹತ್ಯೆಯಾದ ಬೆಳ್ಳಾರೆಯ ಕಳಂಜ ನಿವಾಸಿ ಮಸೂದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ ಆರೋಪಿಗಳಿಗೆ ಆಗಸ್ಟ್ 29 ರವರೆಗೆ ನ್ಯಾಯಾಂಗ ಬಂಧನ ಮುಂದುವರೆಸಿ ಸುಳ್ಯ ನ್ಯಾಯಾಲಯ ಆದೇಶ ನೀಡಿದೆ.
ಆರೋಪಿಗಳಾದ ಅಭಿಲಾಷ್, ಸುನಿಲ್ ಕೆ, ಸುಧೀರ್, ಶಿವಪ್ರಸಾದ್, ರಂಜಿತ್ ಬಿ, ಸದಾಶಿವ ಪೂಜಾರಿ, ರಂಜಿತ್, ಭಾಸ್ಕರ ಕೆ.ಎಂ. ಇದುವರೆಗೂ ನ್ಯಾಯಾಂಗ ಬಂಧನದಲ್ಲಿದ್ದರು.
ಮಂಗಳವಾರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗದ್ದು, ನ್ಯಾಯಾಲಯವು ಆಗಸ್ಟ್ 29 ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶ ನೀಡಿದೆ.