ಉಡುಪಿ ಹತ್ಯಾಕಾಂಡ: ಆರೋಪಿ ಪ್ರವೀಣ್ ಚೌಗಲೆಯನ್ನು ಬಿಗಿಭದ್ರತೆಯಲ್ಲಿ ಉಡುಪಿಗೆ ಕರೆತಂದ ಪೊಲೀಸರು

Prasthutha|

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಪೊಲೀಸರು ಇಂದು ಉಡುಪಿ ಜಿಲ್ಲಾ ಎರಡನೇ ಹೆಚ್ಚ್ಚುವರಿ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

- Advertisement -

ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ಬಿಗಿಭದ್ರತೆಯಲ್ಲಿ ಉಡುಪಿಗೆ ಕರೆ ತರಲಾಗಿದ್ದು, ಪ್ರಕರಣದ ತನಿಖಾಧಿಕಾರಿ ಕೃಷ್ಣ ಎಸ್.ಕೆ. ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಈ ವೇಳೆ ಚಾರ್ಜ್ ವಾಚಿಸುವ ಪ್ರಕ್ರಿಯೆಯನ್ನು ನಡೆಯಿತು. ಬಳಿಕ ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಜೈಲಿಗೆ ಕರೆದೊಯ್ಯಲಾಯಿತು.



Join Whatsapp