Home ಕರಾವಳಿ ಮಂಗಳೂರು: ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ!

ಮಂಗಳೂರು: ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಆರೋಪಿ 17 ವರ್ಷದ ಬಳಿಕ ಸೆರೆ!

ಮಂಗಳೂರು: ನ್ಯಾಯಾಂಗ ಬಂಧನದಿಂದ ಎಸ್ಕೇಪ್ ಆಗಿದ್ದ ಕೊಲೆ ಆರೋಪಿಯೊಬ್ಬ ಬರೋಬ್ಬರಿ 17 ವರ್ಷದ ಬಳಿಕ ಮಂಗಳೂರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಆರೋಪಿ ಸಿದ್ದರಾಜು ಅಲಿಯಾಸ್ ಮೂರ್ತಿ. ಮೂಲತಃ ಮೈಸೂರು ನಗರದ ಮೇಟಗಳ್ಳಿ ಮೂಲದವನಾದ ಇವನು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ.

ಈತ 2005ರಲ್ಲಿ ಮೈಸೂರಿನಲ್ಲಿ ನಡೆದ ಮಹಿಳೆಯೊಬ್ಬರ ಕೊಲೆ ಪ್ರಕರಣದ ಆರೋಪಿಯಾಗಿದ್ದ. ಈ ಪ್ರಕರಣದಲ್ಲಿ ಬಂಧನಕ್ಕೊಳಕ್ಕಾಗಿ ನ್ಯಾಯಾಂಗ ಬಂಧನದಲ್ಲಿದ್ದಾಗ 2006ನೇ ಇಸವಿಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಮಂಡ್ಯ ಜಿಲ್ಲೆಯ ಮದ್ದೂರು ಎಂಬಲ್ಲಿ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ.

ಆ ಬಳಿಕದಿಂದ ಈತನ ಪತ್ತೆಗಾಗಿ ಪೊಲೀಸರು ಹುಡುಕಾಡಿದ್ರೂ ಸಿಕ್ಕಿರಲಿಲ್ಲ. ನಂತರ ಉಡುಪಿಯ ಕೋಟ ಹಾಗೂ ಹಾಸನದ ಚನ್ನರಾಯಪಟ್ಟಣದಲ್ಲಿ ಮನೆ ಕಳ್ಳತನ ಪ್ರಕರಣದಲ್ಲಿ ಅರೆಸ್ಟ್ ಆದಾಗ ಬೇರೆ ಹೆಸರು, ವಿಳಾಸ ಹೇಳಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ!

ಇದೀಗ ಮಂಗಳೂರಿನಲ್ಲಿ ಮನೆ ಕಳ್ಳತನ ಮಾಡಲು ಬಂದು ಪೊಲೀಸರ ಕೈಗೆ ಅತಿಥಿಯಾಗಿದ್ದಾನೆ. ಕಾವೂರಿನಲ್ಲಿ ನಡೆದ ಮನೆಕಳ್ಳತನ ಪ್ರಕರಣದ ಬೆನ್ನತ್ತಿದ್ದ ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರು ಹೊರವಲಯದಲ್ಲಿ ಈತನನ್ನು ಅರೆಸ್ಟ್ ಮಾಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಕೇವಲ ಮಂಗಳೂರು ಮಾತ್ರವಲ್ಲದೇ ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಆಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಹರಿಹರ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿ ಚಿನ್ನಾಭರಣ ಲೂಟಿ ಮಾಡಿದ್ದ ಎಂದು ಗೊತ್ತಾಗಿದೆ. ಸದ್ಯ ಆರೋಪಿಯಿಂದ ಹದಿನೈದು ಲಕ್ಷ ಮೌಲ್ಯದ 270 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

Join Whatsapp
Exit mobile version