ಗ್ಯಾರಂಟಿ ಜಾಹೀರಾತುಗಳಲ್ಲಿ ಸಿಎಂ, ಡಿಸಿಎಂ, ಸಚಿವರ ಫೋಟೋ ಬೇಡ ಎಂದ ಅರ್ಜಿ ವಜಾ

Prasthutha|

ಬೆಂಗಳೂರು: ರಾಜ್ಯ ಸರಕಾರದ 5 ಗ್ಯಾರಂಟಿಗಳ ಪೈಕಿ 2 ಯೋಜನೆಗಳಾದ ಗೃಹಲಕ್ಷ್ಮಿಹಾಗೂ ಗೃಹಜ್ಯೋತಿ ಯೋಜನೆಗಳ ಜಾಹೀರಾತು ಹಾಗೂ ಫ‌ಲಾನುಭವಿಗಳಿಗೆ ನೀಡಲಾದ ಮಂಜೂರಾತಿ ಪತ್ರದಲ್ಲಿ ಹಾಕಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರ ಹೆಸರು ಮತ್ತು ಭಾವಚಿತ್ರಗಳನ್ನು ತೆರವುಗೊಳಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

- Advertisement -

ಬೆಳಗಾವಿ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಹಾಗೂ ನ್ಯಾ| ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿದಾರರ ಪರ ವಕೀಲ ಎಸ್‌. ಉಮಾಪತಿ ಅವರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವ ಯಾವ ಅಂಶಗಳು ಗೋಚರಿಸುತ್ತಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.

Join Whatsapp